Menu

ಶಿಕ್ಷಣ ಸುಸಂಸ್ಕೃತ ಸಮಾಜ ರೂಪಿಸುವುದು

  • Published in ಕೇರಳ
  • Read 65 times
  • Comments::DISQUS_COMMENTS
ಬದಿಯಡ್ಕ: ಹೊಸ ಕನಸುಗಳನ್ನು ಕಟ್ಟಿಕೊಂಡು ಶಾಲೆಗೆ ತಲಪುವ ವಿದ್ಯಾರ್ಥಿಗಳಿಗೆ ಶಿಕ್ಷಣವು ಉತ್ತಮ ಭವಿಷ್ಯವನ್ನು ಕಟ್ಟಿಕೊಡಲಿದೆ. ಜಾಗತೀಕರಣದ ಈ ಕಾಲಘಟ್ಟದಲ್ಲಿ ಉತ್ತಮವಾಗಿ ಕಲಿಯುವುದು ಅನಿವಾರ್ಯ. ಶಿಸ್ತುಬದ್ಧವಾದ ಶಿಕ್ಷಣ ಸುಸಂಸ್ಕøತ ಸಮಾಜವನ್ನು ರೂಪಿಸುತ್ತದೆ. ಈ ನಿಟ್ಟಿನಲ್ಲಿ ಶಾಲೆಯ ಮೆಟ್ಟಿಲುಗಳನ್ನು ಏರಿ ಬರುತ್ತಿರುವ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿ, ಬಾಳು ಹಸನಾಗಲಿ ಎಂದು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಪ್ರೌಢಶಾಲೆಯ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು.
 
ಅವರು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ, ಶಿವಪ್ರಸಾದ್ ಹೊಸಮನೆ, ನಿವೃತ್ತಿ ಹೊಂದುತ್ತಿರುವ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಪ್ರಾಸ್ತಾವಿಕ ಭಾಷಣ ಮಾಡಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.
More in this category: « ಮಕ್ಕಳ ಆಕರ್ಷಿಸಲು ಪ್ರವೇಶೋತ್ಸವ ಸಹಕಾರಿಯಾಗಲಿ: ಸೌಮ್ಯಾ ಮಹೇಶ್ ಬೆಳ್ಳೂರಿನಲ್ಲಿ 8 ಮಂದಿಗೆ ಡೆಂಗ್ಯೂ »
back to top