Menu

ಗಂಗೊಳ್ಳಿಯಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

  • Published in ಉಡುಪಿ
  • Read 36 times
  • Comments::DISQUS_COMMENTS
ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ ಸಮಾರಂಭ ಪ್ರಯುಕ್ತ ಬುಧವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀಮದ್ ಸುಧೀಂದ್ರ ತೀರ್ಥ ಸಭಾ ವೇದಿಕೆಯಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನಗೊಂಡಿತು.
 
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಶ್ರೀ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಬಳಿಕ ಉಭಯ ಶ್ರೀಗಳು ಮಂಗಳಾರತಿ ಬೆಳಗಿ ಆಶೀರ್ವಚನ ನೀಡಿದರು.

ಎಚ್.ಕೃಷ್ಣಾನಂದ ಶೆಣೈ ಗಂಗೊಳ್ಳಿ ದಂಪತಿ ಹಾಗೂ ಎಸ್.ಪಾಂಡುರಂಗ ಆಚಾರ್ಯ ದಂಪತಿಗಳು ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಯಜಮಾನಿಕೆ ವಹಿಸಿದ್ದರು. ದೇವಳದ ಆಡಳಿತ ಮೊಕ್ತೇಸರ ಬೈಲೂರು ಮಂಜುನಾಥ ಶೆಣೈ, ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ಜಿಎಸ್‍ಬಿ ಸಮಾಜದ ಪುರೋಹಿತರು, ವೈದಿಕರು, ನಿನಾದ ಸಂಸ್ಥೆಯ ಪದಾಧಿಕಾರಿಗಳು, ದಶಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
More in this category: « ಗಂಗೊಳ್ಳಿಯಲ್ಲಿ ಮೂವರು ಯತಿವರ್ಯರ ಸಮಾಗಮ ; ವೈಭವದ ಪುರಪ್ರವೇಶ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಗೆ ಶೇ.97.92 ಫಲಿತಾಂಶ »
back to top